ಗುಟ್ಟಾಗಿ ಮದುವೆ ಮಾಡಿಕೊಂಡ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ, ರಕ್ಷಿತ್ ಶೆಟ್ಟಿ ಬೇಸರ

 | 
H

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ 2024ರ ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಜೋಡಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ತೆಲುಗು ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಈ ಬಗ್ಗೆ ಇಬ್ಬರು ತುಟಿ ಬಿಚ್ಚದಿದ್ದರೂ ಅವರ ನಡುವಿನ ಒಡನಾಟ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಇಬ್ಬರು ಒಟ್ಟಿಗೆ ಓಡಾಡುತ್ತಿರುವ ಫೋಟೊಗಳು ಹಲವು ಬಾರಿ ವೈರಲ್‌ ಆಗಿದ್ದವು.ಗೀತ ಗೋವಿಂದಂ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. 

ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮೊದಲ ಬಾರಿಗೆ ಪರಶುರಾಮ್ ನಿರ್ದೇಶನದ 2018ರ ಗೀತ ಗೋವಿಂದಂ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಚಲನಚಿತ್ರ ಸೂಪರ್‌ ಸಕ್ಸಸ್ ಆಗಿತ್ತು. 2019 ರಲ್ಲಿ, ರಶ್ಮಿಕಾ ಮತ್ತು ವಿಜಯ್ ಮತ್ತೆ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. 

ಇಬ್ಬರೂ ಇದರ ಬಗ್ಗೆ ತುಟಿಕ್ ಪಿಟಿಕ್ ಎಂದಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜನಾ? ಅಥವಾ ಗಾಸಿಪ್? ಇಬ್ಬರ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.