ದರ್ಶನ್ ಜೊತೆ ಬೆಂಗಳೂರಿನಲ್ಲಿ ಶಾಪಿಂಗ್ ಮಾಡಿದ ವಿಜಯಲಕ್ಷ್ಮಿ, ದಾಸನಿಗೆ ಲಕ್ಷ ಬೆಲೆಯ ಬಟ್ಟೆ ಖರೀದಿ

 | 
Nd
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲಾ ಒಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ಪತಿ ಜೊತೆಗಿನ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಜೋಡಿಯ ಫೋಟೋ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ದರ್ಶನ್ ಜೊತೆಗಿನ ವಿಶೇಷ ಫೋಟೋವೊಂದನ್ನು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 
ಇನ್ಸ್ಟಾಗ್ರಾಂನಲ್ಲಿ ನೆಚ್ಚಿನ ಕುದುರೆ ಜೊತೆ ದರ್ಶನ್ ದಂಪತಿ ಖುಷಿಯಿಂದ ಪೋಸ್ ನೀಡಿದ್ದಾರೆ. ಈ ಫೋಟೋ ಈಗ ನಟನ ಫ್ಯಾನ್ಸ್ ಪೇಜ್‌ಗಳಲ್ಲಿ ವೈರಲ್ ಆಗ್ತಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಅಂದಹಾಗೆ, ಡೆವಿಲ್ ಸಿನಿಮಾದ ಚಿತ್ರೀಕರಣವು ಮೈಸೂರು ಹಾಗೂ ರಾಜಸ್ಥಾನದಲ್ಲಿ ನಡೆದಿದೆ. ಈ ಸಿನಿಮಾ ಕೆಲಸ ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. ತಾರಕ್ ಡೈರೆಕ್ಟರ್ ಮಿಲನಾ ಪ್ರಕಾಶ್ ಡೆವಿಲ್ಗೆ ನಿರ್ದೇಶನ ಮಾಡುತ್ತಿದ್ದಾರೆ.
ದರ್ಶನ್ ಅವರು ಡೆವಿಲ್ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈಗಾಗಲೇ ರಾಜಸ್ಥಾನದಲ್ಲಿ ಕೆಲವು ಪ್ರಮುಖ ಹಂತದ ಶೂಟ್ ಮುಗಿಸಿ ಮರಳಿದ್ದಾರೆ. ಈಗ ನಮ್ಮ ರಾಜ್ಯದಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆ ಬಳಿಕ ತಂಡದವರು ಹೈದರಾಬಾದ್​ಗೆ ತೆರಳಲಿದ್ದಾರೆ ಎನ್ನಲಾಗಿತ್ತು. ಇತ್ತೀಚೆಗೆ ಚಿತ್ರದ ಸೆಟ್​ನ ಫೋಟೋ ವೈರಲ್ ಆಗಿತ್ತು. ಇದರಲ್ಲಿ ದರ್ಶನ್ ಅವರು ಮುಖ್ಯಮಂತ್ರಿ ಪಾತ್ರ ಮಾಡುತ್ತಿದ್ದಾರೆ ಎಂಬ ವಿಚಾರ ರಿವೀಲ್ ಆಗಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.