ಹಿಂದೂಗಳ ಹೃದಯ ಸಾಮ್ರಾಟ್ ಕಲ್ಲಡ್ಕ ಪ್ರಭಾಕರ್ ಭಟ್ ಬಗ್ಗೆ ಮುಸ್ಲಿಂ ಮಹಿಳೆ ಹೇ ಳಿದ್ದೇನು ಗೊ.ತ್ತಾ

 | 
Hh

ಮುಸ್ಲಿಂ ಮಹಿಳೆಯರ ಕುರಿತು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರು ಮಂಡ್ಯ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಇದೀಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಭಟ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರಗತಿಪರರು, ಚಿಂತಕರು ಭಟ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. 

ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಸಂಘಟನೆಗಳು ದೂರು ನೀಡುವ ಕಾರ್ಯ ಆರಂಭಿಸಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಭಟ್ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ, ಮತ್ತು ವಿಚ್ಚೇಧಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಕುಂದುಂಟುಮಾಡುವ ಹೇಳಿಕೆಯನ್ನು ನೀಡಿದ್ದಾಗಿ ಆರೋಪಿಸಿರುವ ಅವರು, ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂಥ ಮಾತುಗಳನ್ನು ಆಡಿರುವ ಭಟ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮಹಿಳಾ ಹೋರಾಟಗಾರ್ತಿ ಹುಣಸೂರಿನ ನಜ್ಮಾ ನಝೀರ್ ಚಿಕ್ಕನೇರಳೆ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇರೆ ಧರ್ಮವನ್ನು ಅವಮಾನಿಸಿ, ಧರ್ಮ- ಧರ್ಮಗಳ ಮಧ್ಯೆ ಎತ್ತಿಕಟ್ಟಿ, ಗಲಭೆ ಮತೀಯ ಸಾವು-ನೋವಿಗೆ ಕಲ್ಲಡ್ಕ ಪ್ರಭಾಕರ್ ಅವರು ಪ್ರಚೋದನೆ ನೀಡಿದ್ದಾರೆಂದು ನಜ್ಮಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಜತೆಗೆ ಅವರ ಮೇಲೆ ರೌಡಿಶೀಟ್ ತೆರೆಯುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ

ರವಿವಾರ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ" ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದ. ಇನ್ನೂ ಅನೇಕ ಪ್ರಚೋದನಕಾರಿ ಮಾತುಗಳನ್ನು ಅದೇ ಭಾಷಣದಲ್ಲಿ ಪ್ರಭಾಕರ್ ಭಟ್ ಹೇಳಿದ್ದ. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298 ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಮುಸ್ಲಿಂ ಮಹಿಳೆಯರ ಕುರಿತು ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿರುವ ನಜ್ಮಾ ನಝೀರ್, ಪ್ರಭಾಕರ ಭಟ್ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.