ಬೆಟ್ಟದ ಮೇಲೆ ಕೊನೆಯ ಕ್ಷಣ ಶಿಕ್ಷಕಿ ಜೊತೆ ಈ ಕಿರಾತಕ ಮಾಡಿದ ಕೆಲಸ ಏನು ಗೊ.ತ್ತಾ

 | 
H

ಕಳೆದ ಜನವರಿ 20ರ ಶನಿವಾರದಿಂದ ವಿವಾಹಿತೆಯೊಬ್ಬಳು ನಾಪತ್ತೆಯಾಗಿದ್ದಳು. ಇದೀಗ ನಾಪತ್ತೆಯಾದವಳ ಮೃತದೇಹವು ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿದೆ. ಮಾಣಿಕ್ಯನಹಳ್ಳಿಯ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದಳು.

ದೀಪಿಕಾ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ಆದರೆ ಶನಿವಾರ ಸಂಜೆ ವೇಳೆ ಸ್ಕೂಟರ್ ಬೆಟ್ಟದ ತಪ್ಪಲಿನಲ್ಲಿ ನಿಂತಿರುವುದು ಪತ್ತೆಯಾಗಿತ್ತು. ಬೆಟ್ಟದ ತಪ್ಪಲಿನಲ್ಲಿ ಸ್ಕೂಟರ್‌ ನಿಂತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.

ಮೇಲುಕೋಟೆಯಲ್ಲಿ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಪತಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಪತ್ನಿಗಾಗಿ ಹುಡುಕಾಟ ನಡೆಸಿದಾಗ ಬೆಟ್ಟದ ತಪ್ಪಲಿನಲ್ಲಿ ಮಣ್ಣಿನಲ್ಲಿ ಹೂತುಹಾಕಿದಂತೆ ಇತ್ತು. ಕೈಯಲ್ಲೇ ತೆಗೆದುನೋಡಿದಾಗ ಮೊದಲಿಗೆ ಬಟ್ಟೆ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದವಿ. ಅವರು ಬಂದು ಮೃತದೇಹವನ್ನು ಹೊರತೆಗೆದರು. ಮುಖವೆಲ್ಲವೂ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಸಿಕ್ಕಿತ್ತು. 

ಈ ಘಟನೆಯನ್ನೂ ನೋಡಿದರೆ, ಮೊದಲೇ ಪ್ರಿಪ್ಲ್ಯಾನ್‌ ಮಾಡಿ ಕೊಲೆ ಮಾಡಿದಂತೆ ಕಾಣುತ್ತಿದೆ ಎಂದು ಲೋಕೇಶ್‌ ಮಾಹಿತಿ ನೀಡಿದ್ದಾರೆ. ಹುಡುಕಾಟ ನಡೆಸಿದ್ದರೆ ಜೀವಂತವಾಗಿ ನೋಡಬಹುದಿತ್ತು. ಸರ್ಕಲ್‌ ಇನ್‌ಸ್ಪೆಕ್ಟರ್‌ಗೆ 15 ಸಾವಿರ ರೂ. ಹಣ ಕೊಟ್ಟರು, ನಿಯತ್ತಾಗಿ ಕೆಲಸ ಮಾಡಲಿಲ್ಲ. ಭಾನುವಾರ ಅಂತೇಳಿ ತನಿಖೆ ವಿಳಂಬ ಮಾಡಿದರು. ಬಳಿಕ ನಾವೇ ಖುದ್ದು ಬೆಟ್ಟದ ತಪ್ಪಲಿನಲ್ಲಿ ಹುಡುಕಾಡಿದಾಗ ದೀಪಿಕಾಳ ಮೃತದೇಹವು ಪತ್ತೆಯಾಗಿತ್ತು. 

ಎಲ್ಲವನ್ನೂ ನಾವೇ ಮಾಡುವುದಾದರೆ ಆರಕ್ಷಕರು ಇರುವುದಾದರೂ ಯಾಕೆ? ಕೂಡಲೇ ಅವರನ್ನು ಸಸ್ಪೆಂಡ್‌ ಮಾಡಬೇಕೆಂದು ದೀಪಿಕಾಳ ಅಕ್ಕ ಕಿಡಿಕಾರಿದ್ದಾರೆ. ಇನ್ನು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.