ಪವಿತ್ರ ಗೌಡ ಮಗಳು ದರ್ಶನ್ ಗೆ ಏನಾಗಬೇ ಕು; ಅಧಿಕಾರಿಗಳ‌ ಬಳಿ ಬಾಯಿಬಿಟ್ಟ ದಾ ಸ

 | 
Hs

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪ ಹೊತ್ತಿರೋ ನಟ ದರ್ಶನ್ ಜೈಲು ಸೇರಿದ್ದಾರೆ. ಜೊತೆಗೆ ದರ್ಶನ್ ಗೆಳತಿ ಪವಿತ್ರಾ ಗೌಡ ಕೂಡ ಕಾನೂನು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜೈಲಿನಲ್ಲಿರೋ ದರ್ಶನ್ ಭೇಟಿಗೆ ಈಗಾಗಲೇ ಮನೆಯವರು, ಆಪ್ತ ಸ್ನೇಹಿತರು ಸಹ ಬಂದಿದ್ದಾರೆ.ಇದಲ್ಲದೆ ಕೆಲದಿನಗಳ ಹಿಂದೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ಪರಪ್ಷನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ರು.

ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾದ ವಿಜಯಲಕ್ಷ್ಮಿ ಪತಿಗೆ ಧೈರ್ಯ ಹೇಳಿದ್ದಾರೆ ಎನ್ನಲಾಗ್ತಿದೆ. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ.  ವಿಜಯಲಕ್ಷ್ಮಿ ಅವರು ಪೊಲೀಸ್​ ಆಯುಕ್ತರಿಗೆ ಬರೆದ ಪತ್ರದಲ್ಲಿ, ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ .

19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ. ಇಷ್ಟೇ ಅಲ್ಲದೆ ಈ ಪತ್ರದಲ್ಲಿ, ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ. ನೀವು ಮಾಧ್ಯಮಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಗೌಡ ಅಂತ ಹೇಳಿದ್ದೀರಿ. ಅದೇ ರೀತಿ ಗೃಹಸಚಿವರೂ ಕೂಡ ಒಮ್ಮೆ ಅದನ್ನೇ ಉಚ್ಚರಣೆ ಮಾಡಿದ್ದಾರೆ. 

ಹೀಗಾಗಿ ಪೊಲೀಸ್ ರೆಕಾರ್ಡ್ ಅಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ, ದರ್ಶನ್ ಅವರನ್ನು ಮದುವೆಯಾಗಿದ್ದಾರೆ ಎಂದು ಉಲ್ಲೇಖಿಸಬೇಡಿ, ಯಾವುದೇ ದಾಖಲೆಗಳಲ್ಲಿ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಇನ್ನು ಇತ್ತೀಚೆಗಷ್ಟೇ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಪುತ್ರ ಜೈಲಿಗೆ ದರ್ಶನ್​ ನೋಡಲು ಬಂದಿದ್ದರು.

ಈ ವೇಳೆ ದರ್ಶನ್​ ಅವರಿಗೆ ಧೈರ್ಯ ತುಂಬಿ ಬಂದಿದ್ದಾರೆ ಎನ್ನಲಾಗಿತ್ತು. ಇದೇ ವೇಳೆ ತನ್ನನ್ನು ನೋಡಲು ಜೈಲಿಗೆ ಬಂದ ಮಗ ಹಾಗೂ ಪತ್ನಿ ವಿಜಯಲಕ್ಷ್ಮಿ ನೋಡುತ್ತಿದ್ದಂತೆ ದರ್ಶನ್ ಭಾವುಕರಾದ್ರು ಎನ್ನಲಾಗ್ತಿದೆ. ಅಷ್ಟೇ ಅಲ್ಲದೇ ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ಕಣ್ಣೀರು ಹಾಕಿದ್ರು ಎಂದು ವರದಿ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.