ನಮ್ಮ ರಾಜ್ಯದಲ್ಲಿ ಯಾವ ಜಾತಿ ಅತಿಹೆಚ್ಚು ಗೊ.ತ್ತಾ

 | 
Hvg

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2015 ರಲ್ಲಿ ಜಾತಿಗಣತಿ ನಡೆಸಿತ್ತು. ಆದರೆ ವರದಿಯನ್ನು ಇನ್ನು ಬಿಡುಗಡೆ ಮಾಡಿಲ್ಲ. ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ಜಾತಿ ಗಣತಿ ವರದಿಯನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರೂ, ವರದಿ ಇನ್ನೂ ಕೈಸೇರಿಲ್ಲ. ಈ ನಡುವೆ ಬಿಹಾರ ಸರ್ಕಾರ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಗೂ ಮುನ್ನ ಕಾಂಗ್ರೆಸ್ ಜಾತಿಗಣತಿ ವರದಿಯ ಬಿಡುಗಡೆಯ ಬಗ್ಗೆ ಮಾತನಾಡುತ್ತಿತ್ತು. ತಳಸಮುದಾಯಕ್ಕೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂಬ ಅಭಿಪ್ರಾಯಗಳನ್ನು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಇದು ಒಂದು ರಾಜಕೀಯ ಚರ್ಚೆಗೂ ವೇದಿಕೆಯಾಗಿತ್ತು. 

ಇದೀಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಾಮಾಜಿಕ ನ್ಯಾಯದ ಪರವಾಗಿ ಮಾತನಾಡುವ ಸರ್ಕಾರ ಕೂಡಲೇ ವರದಿಯನ್ನು ಬಿಡುಗಡೆ ಮಾಡಬೇಕು ಎಂಬ ಆಗ್ರಹವನ್ನು ಹಲವರು ಮಾಡುತ್ತಿದ್ದಾರೆ. ಅದರಲ್ಲೂ ಕಾಂಗ್ರೆಸ್ ಶಾಸಕರೇ ಈ ಬೇಡಿಕೆಯನ್ನು ಮುಂದಿಡುತ್ತಿದ್ದಾರೆ.

ಜಾತಿ ಗಣತಿ ಬಹಿರಂಗಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿಯವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡಾ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕಿದೆ ಎಂದು ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಕೂಡಾ ಸರ್ಕಾರಕ್ಕೆ ಜಾತಿಗಣತಿ ವರದಿ ಜಾರಿಯ ಬಗ್ಗೆ ಒತ್ತಡ ಹೇರಿದ್ದಾರೆ. ಜಾತಿ ಗಣತಿ ವರದಿ ಇನ್ನೂ ಸಲ್ಲಿಕೆ ಆಗಿಲ್ಲ. ಆದರೆ ಅದು ಬಹಿರಂಗ ಆಗಬೇಕು. ಬಿಹಾರ ಮಾದರಿಯಲ್ಲಿ ಕರ್ನಾಟಕದಲ್ಲಿ ವರದಿ ಬಿಡುಗಡೆ ಮಾಡಲಿ. ಆರ್ಥಿಕವಾಗಿ, ಶೈಕ್ಷಣಿಕ, ಸಾಮಾಜಿಕ ತುಳಿತಕ್ಕೆ ಒಳಗಾದವರಿಗೆ ಇದರಿಂದ ಅನುಕೂಲ ಆಗಲಿದೆ. 

ಜಾತಿಗಣತಿ ವರದಿಯನ್ನು ತ್ವರಿತವಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಕೊಡಲಿ ಎಂದು ಆಗ್ರಹಿಸಿದ್ದಾರೆ. ಜಾತಿ ಗಣತಿ ಹಾಗೂ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನೇ ಹಿಂದೆ ಆದೇಶ ಮಾಡಿದ್ದು. ಆಗ ಕಾಂತರಾಜು ಆವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ನಂತರ ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. 

ಆಗ ವರದಿಯನ್ನು ಪಡೆಯಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರು ವರದಿ ವರದಿಯನ್ನು ಸಲ್ಲಿಸುವಂತೆ ತಿಳಿಸಿಲಾಗಿದೆ, ಆದರೆ ಕೊಟ್ಟಿಲ್ಲ ಎಂದಿದ್ದಾರೆ. ಇನ್ನು ವಿಧಾನಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯಿತ ಮಂತ್ರಿಗಳೇ ಇದ್ದಾರೆ. ಹಾಗಾಗಿ ಹೆಚ್ಚಿನ ಜನ ಲಿಂಗಾಯತ ಸಮುಧಾಯದವರೆ ಇದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಇದೀಗ ಎಲ್ಲರ ಚಿತ್ತ ಜಾತಿಗಣತಿಯತ್ತ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.