ಬಿಗ್ ಬಾಸ್ ಪ್ರತಾಪ್ ಗರ್ಲ್ ಫ್ರೆಂಡ್ ಯಾರು ಗೊ.ತ್ತಾ, ಮೆಚ್ಚುಗೆ ಪಟ್ಟ ಕನ್ನಡಿಗರು

 | 
H

ಬಿಗ್‌ಬಾಸ್‌  ಕನ್ನಡ 10ನೇ ಸೀಸನ್‌ನಲ್ಲಿ ಡ್ರೋಣ್‌ ಪ್ರತಾಪ್‌ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. 

ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್‌ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು.ಅದರಲ್ಲಿ ಸುದೀಪ್‌ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋಣ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. 

ಅವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ಪಡೆದುಕೊಂಡಿದ್ದಾರೆ. ಇದೀಗ ರನ್ನರ್ ಆಗಿರುವ ಸಂತೋಷವನ್ನು ಹಂಚಿಕೊಂಡಿರುವ ಡ್ರೋನ್ ಪ್ರತಾಪ್ ತನಗೆ ಹಣ ಬೇಡ ಕೇವಲ ಟ್ರೋಫಿ ಗೆಲ್ಲುವ ಉದ್ದೇಶವಿತ್ತು ಎಂದು ಹೇಳಿಕೊಂಡಿದ್ದಾರೆ. ಇನ್ನು ಇವರ ಕುರಿತಾಗಿ ಮಾಜಿ ಬಿಗ್ಬಾಸ್ ವಿನ್ನರ್ ಪ್ರಥಮ್ ಅವರು ದೀದಿಗಳ ಪಾಲಿನ ದಾದ ಎಂದು ಬಿರುದನ್ನು ನೀಡಿ ಹಾರೈಸಿದ್ದಾರೆ.

ಇನ್ನು ಎಲ್ಲರಿಗೂ ಒಳಿತಾಗಲಿ. ರನ್ನರ್ ಆಫ್ ಆಗಿರೋದು ಖುಷಿ ತಂದಿದೆ. ನನಗೆ ಎರಡೂವರೆ ಕೋಟಿಯಷ್ಟು ವೋಟ್ ಬಂದಿದೆ. ಗೆದ್ದಿದ್ದೇನೆ ಅನಿಸುತ್ತಿದೆ. ನನಗೆ ವಿನ್ನರ್ ಆಗಬೇಕು ಎಂಬ ಆಸೆ ಇತ್ತು ಆದ್ರೂ ರನ್ನರ್ ಆಫ್ ಆಗಿರೋದು ಕೂಡ ಬಹಳ ಖುಷಿ ಕೊಟ್ಟಿದೆ. ಬಂದಿರೋ ಹಣವನ್ನು ಬಡವರಿಗೆ ಕೊಡ್ತಿನಿ. ಮಕ್ಕಳ ಆಪರೇಷನ್ ಗೆ ಕೊಡ್ತಿನಿ. 

ಫುಡ್ ಡೆಲಿವರಿ ಮಾಡೋರು ಯಾರು ಕಷ್ಟದಲ್ಲಿದ್ದಾರೆ ಅಂಥವರಿಗೆ ಬೈಕ್ ಕೊಡಿಸ್ತಿನಿ ಅಂತಾ ಹೇಳಿರುವ ಪ್ರತಾಪ್. ನಾನು ಬಿಗ್ ಬಾಸ್ ರನ್ನರ್ ಆಫ್ ಜೊತೆಗೆ ನಿಮ್ಮೆಲ್ಲರ ಮನಸನ್ನು ಗೆದ್ದಿದ್ದೇನೆ ಎಂದು ರನ್ನರ್ ಆಫ್ ಡ್ರೋಣ್ ಖುಷಿ ಹಂಚಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.