ಅರ್ಜುನನ್ನು ಕೊಂ.ದಿದ್ದು ಯಾರು, ಪ್ರತ್ಯಕ್ಷದರ್ಶಿ ಬಿಚ್ಚಿಟ್ರು ಅಧಿಕಾರಿಗಳ ಮುಖವಾಡ

 | 
Nd

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನಿಗೆ ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಅರ್ಜುನ ಸಾವಿಗೀಡಾಗಿದ್ದಾನೆ ಎನ್ನಲಾಗುತ್ತಿದೆ. ಆದರೆ ಅರ್ಜುನ ಸಾವಿನ ಬಗ್ಗೆ ಮಾವುತರೊಬ್ಬರು ಸತ್ಯ ಬಿಚ್ಚಿಟ್ಟಿದ್ದಾರೆ . ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಒಂಟಿ ಸಲಗ ದಾಳಿ ಮಾಡಿದ್ದರಿಂದ ಸಾವಾಗಿದೆ ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮಹಾ ಪ್ರಮಾದ ನಡೆದು ಹೋಗಿದೆ. ಗುರಿ ತಪ್ಪಿ ಬಿದ್ದ ಅದೊಂದು ಗುಂಡೇಟಿನಿಂದ ಬಲ ಕಳೆದುಕೊಂಡು ಕಾದಾಡಲಾಗದೆ ಅರ್ಜುನ ಆನೆ ಮೃತಪಟ್ಟಿದೆ ಎನ್ನಲಾಗುತ್ತಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಮದದಲ್ಲಿರುವ ಕಾಡಾನೆ ಹುಚ್ಚನಂತೆ ಆಡುತ್ತದೆ ಎಂಬ ಮಾಹಿತಿ ಕೊತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಪ್ಪು ನಿರ್ಧಾರ ಮಾಡಿದ್ದಾರೆ ಎಂಬ ಬಗ್ಗೆ ತಜ್ಞರು ಟೀಕೆ ಮಾಡಿದ್ದಾರೆ. ಇದರ ಜೊತೆಗೆ ಈಗ ಅರಣ್ಯ ಇಲಾಖೆ ಸಿಬ್ಬಂದಿ ಮತ್ತೊಂದು ಎಡವಟ್ಟು ಬಯಲಾಗಿದೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಗುಂಡು ತಗುಲಿದ ಬಗ್ಗೆ ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಭರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಕಾರ್ಯಾಚರಣೆ ವೇಳೆ ಅರಿವಳಿಕೆ ಇಂಜೆಕ್ಷನ್ ನೀಡಲಾಯಿತು. ಅದು ಗುರಿ ತಪ್ಪಿ ಪ್ರಶಾಂತ್ ಎಂಬ ಸಾಕಾನೆಗೆ ಬಿತ್ತು. ನಂತರ ಇನ್ನೊಂದು ಇಂಜೆಕ್ಷನ್ ನೀಡಿ ಪ್ರಶಾಂತ್ ಆನೆಯನ್ನು ಸುಧಾರಿಸಲಾಯಿತು. 

ಆ ಮೇಲೆ ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಕಾಡಾನೆ ಸಾಕಾನೆ ಕಾಳಗದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಆಗ ಅರ್ಜುನನ ಕಾಲಿಗೆ ಗುಂಡು ತಗುಲಿತು. ಗುಂಡು ಬೀಳುತ್ತಲೇ ಅರ್ಜುನ ಬಲ ಕಳೆದುಕೊಂಡ. ದೊಡ್ಡ ಆನೆ ಆದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ. 

ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ಸಾಕಾನೆ ಅರ್ಜುನನ ಮೇಲೆ ಹಠಾತ್ ದಾಳಿ ಮಾಡಿತು ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ತುಣುಕುಗಳು ಎಲ್ಲೆಡೆ ಸದ್ದು ಮಾಡುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.