ಉಡುಪಿಗೆ ಬಂದ ಅಂಧ ಭಕ್ತರು ಸೌಜನ್ಯ ಬಳಿ ಯಾಕೆ ಬಂದಿಲ್ಲ, ಬಡ ಹೆಣ್ಣುಮಗಳ ದೌರ್ಜನ್ಯ ಕೇಳುವವರಿಲ್ಲ ಈ ಸಮಾಜದಲ್ಲಿ

ಸೌಜನ್ಯಾ ಅತ್ಯಾಚಾರ ಇಡೀ ದೇಶದ ಗಮನ ಸೆಳೆದ ಪ್ರಕರಣ ಅದರಂತೆ ಇದೀಗ ಉಡುಪಿಯಲ್ಲಿ ವಿಡಿಯೋ ಪ್ರಕರಣ ಒಂದು ಸದ್ದುಮಾಡ್ತಿದೆ. ಹೌದು ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್ 10 ರಂದು
ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈಗ 11 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಆದರೆ ಅದನ್ನು ಈ ಹಿಂದಿನಿಂದ ಸೌಜನ್ಯಾ ತಂದೆ ತಾಯಿ ಹೇಳುತ್ತಲೇ ಬಂದಿದ್ದಾರೆ.
ವೀರೇಂದ್ರ ಹೆಗ್ಗಡೆಯ ತಮ್ಮನ ಮಗ ನಿಶ್ಚಲ್ ಹೆಗ್ಡೆ, ಅನ್ನಪೂರ್ಣ ಛತ್ರದ ಮ್ಯಾನೇಜರ್ ಮಗ ಧೀರಜ್ ಜೈನ್, ವೀರೇಂದ್ರ ಹೆಗ್ಗಡೆಯ ಮನೆಯಲ್ಲಿ ಕೆಲಸ ಮಾಡುವವರ ಮಗ ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ ಮೇಲೆ ಸೌಜನ್ಯಳ ತಂದೆ ತಾಯಿಗಳು ನೇರ ಆರೋಪ ಮಾಡಿದ್ದರು. ಆದರೆ ಯಾರೂ ಕೂಡ ಕಿವಿಗೆ ಹಾಕಿಕೊಂಡಿರಲಿಲ್ಲ. ಉಡುಪಿ ಕಾಲೇಜು ವಿದ್ಯಾರ್ಥಿನಿ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸಮಸ್ಯೆ ಖುಷ್ಬೂ ಸುಂದರ್ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆ ಬಳಿಕ ಹಿಡನ್ ಕ್ಯಾಮರಾ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಇದೀಗ ಉಡುಪಿಯ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಪ್ರಕರಣದ ಆರೋಪ ಎದುರಿಸುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಇದೀಗ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಉಡುಪಿಗೆ ಬಂದ ರಾಜಕಾರಣಿಗಳಿಗೆ ಪುತ್ತೂರಿಗೆ ಬರಲು ಆಗುವುದಿಲ್ಲವೇ ನಮ್ಮ ಕಣ್ಣೀರು ಕಾಣುವುದಿಲ್ಲವೇ ಎಂದು ಸೌಜನ್ಯಾ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.