ಸೌಜನ್ಯ ಕೇಸ್ ನಲ್ಲಿ ಧರ್ಮಸ್ಥಳದ ಹೆಸರು ಯಾಕೆ ಕೇಳಿ ಬರುತ್ತಿದೆ, ಅನ್ಯಾಯ ಮಾಡಿದ್ದು ಯಾರು ಗೊತ್ತಾ

ಒಂದು ದಶಕದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯನ್ನು ನಡುಗಿಸಿದ್ದ ಸೌಜನ್ಯಾ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ, 2012ರ ಅ.9 ರಂದು ಕಾಣೆಯಾಗಿದ್ದಳು. ಆ ಕುರಿತು ಆಕೆಯ ತಂದೆ ಚಂದ್ರಪ್ಪಗೌಡ ಅದೇ ದಿನ ಬೆಳ್ತಂಗಡಿ ಪೋಲೀಸರಿಗೆ ದೂರು ನೀಡಿದ್ದರು.
ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ಸಿಐಡಿಗೆ ತನಿಖೆಯನ್ನು ವರ್ಗಾಯಿಸಲಾಗಿತ್ತು. ಘಟನೆ ಬಳಿಕ ದೊಡ್ಡ ಮಟ್ಟದ ಹೋರಾಟ ನಡೆಯಿತು. ಅದರ ಪರಿಣಾಮ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು.
ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ತನಿಖೆ ನಡೆಸಿದ ಬಳಿಕ ಸಿಬಿಐ ತನಿಖೆ ನಡೆಸಿತ್ತು. ಸಂತೋಷ್ ರಾವ್ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಈ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಒಮ್ಮೆ ಸಿಬಿಐ ತನಿಖೆ ನಡೆಸಿರುವ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
ಆದರೆ ಇದೀಗ ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ. ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರು ಹೇಳಿದ್ದಾರೆ.
ಅಲ್ಲದೆ ಕಾಶ್ಮೀರ ಫೈಲ್ ಅಂತೆ ಸೌಜನ್ಯಳ ಕಥನವನ್ನು ಸಿನಿಮಾ ಮಾಡಬೇಕು ಇದರಿಂದಾಗಿ ಸತ್ತ ಸೌಜನ್ಯಳ ಆತ್ಮಕ್ಕೆ ಶಾಂತಿ ಸಿಗಬೇಕು. ಆರೋಪಿ ಸಂತೋಷ್ ರಾವ್ ತಪ್ಪಿತಸ್ಥ ಅಲ್ಲ ಎಂಬುದನ್ನು ನಾವು 10 ವರ್ಷ ಹಿಂದೆಯೇ ಹೇಳಿದ್ದೇವೆ. ಆದರೆ, ಪೊಲೀಸರು ಒತ್ತಡಕ್ಕೆ ಮಣಿದು ಸಂತೋಷ್ ರಾವ್ ಅವರನ್ನು ತಪ್ಪಿತಸ್ಥನಾಗಿಸಿ, ನಿಜವಾದ ಅಪರಾಧಿಗಳನ್ನು ರಕ್ಷಿಸಲು ವ್ಯವಸ್ಥೆ ಮಾಡಿಕೊಂಡಿದ್ದರು.
ನಿಜ ಆರೋಪಿಗಳ ವಿರುದ್ಧದ ಎಲ್ಲಾ ಸಾಕ್ಷ್ಯಗಳನ್ನು ಹಂತಹಂತವಾಗಿ ನಾಶಪಡಿಸಿದ್ದರು ಎಂದು ಮಹೇಶ್ ಶೆಟ್ಟಿ ಆರೋಪಿಸಿದರು. ನಮ್ಮ ಹೋರಾಟ ಉಸಿರು ಇರುವವರೆಗೆ ನಡೆಯಲಿದೆ. ಮುಂದಿನ ಹಂತವಾಗಿ ಸೌಜನ್ಯಾ ಅವರ ಮನೆಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ. ಆಕೆ ಒಂದು ಶಕ್ತಿಯಾಗಲಿದ್ದಾಳೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಸಹ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಭೀಕರತೆಯ ಅರಿವು ಎಲ್ಲರಿಗೂ ಆಗಬೇಕು ಎಂದು ಅಲ್ಲಿನ ಜನರು ಅಭಿಪ್ರಾಯ ಪಟ್ಟಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.