ಯಶ್ ರಾಧಿಕಾ ಅವರನ್ನು ನೋಡಿ ಕಲೀರಿ ಎಂದ ಜಡ್ಜ್;

 | 
Uu

ಕನ್ನಡ ರಾಪರ್, ಸಂಗೀತ ನಿರ್ದೇಶಕ, ನಟ ಚಂದನ್ ಶೆಟ್ಟಿ ಬಾಳಲ್ಲಿ ಬಿರುಗಾಳಿ ಬೀಸಿದೆ. ಚಂದನ್ ಶೆಟ್ಟಿ - ನಿವೇದಿತಾ ಗೌಡ ದಾಂಪತ್ಯ ಜೀವನ ಮುರಿದುಬಿದ್ದಿದೆ. ಪರಸ್ಪರ ಪ್ರೀತಿಸಿ ಮದುವೆಯಾದ ಚಂದನ್ ಶೆಟ್ಟಿ - ನಿವೇದಿತಾ ಗೌಡ ಇದೀಗ ದೂರಾಗಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಚಂದನ್ ಶೆಟ್ಟಿ - ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ.

ವಿಚ್ಛೇದನ ಪ್ರಕ್ರಿಯೆ ವೇಳೆ ಪತಿಯಿಂದ ಪತ್ನಿ ಜೀವನಾಂಶ ಕೇಳುವುದು ಸಾಮಾನ್ಯ. ಆದರೆ, ಪತಿ ಚಂದನ್ ಶೆಟ್ಟಿ ಅವರಿಂದ ನಿವೇದಿತಾ ಗೌಡ ಜೀವನಾಂಶ ಕೇಳಿಲ್ಲ. ಹಾಗಂತ ಲಾಯರ್ ಅನಿತಾ ಖಚಿತ ಪಡಿಸಿದ್ದಾರೆ.ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ.. ಇಬ್ಬರೂ ವೃತ್ತಿಜೀವನದಲ್ಲಿ ಬಿಜಿಯಾಗಿದ್ದಾರೆ. ಹೀಗಾಗಿ, ಯಾರೂ ಜೀವನಾಂಶ ಕೇಳಿಲ್ಲ. ತುಂಬಾ ಗೌರವಯುತವಾಗಿ ದಾಂಪತ್ಯ ಜೀವನದಿಂದ ಇಬ್ಬರೂ ಹೊರಗೆ ಬಂದಿದ್ದಾರೆ. ಇಬ್ಬರಿಗೂ ಒಬ್ಬರಿಗೊಬ್ಬರ ಮೇಲೆ ತುಂಬಾ ಗೌರವ ಇದೆ.

ಒಂದು ವರ್ಷದ ಹಿಂದೆಯೇ ವಿಚ್ಛೇದನದ ಬಗ್ಗೆ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ತೀರ್ಮಾನ ಮಾಡಿದ್ರಂತೆ. ಇಬ್ಬರ ಪೋಷಕರೂ ಇಬ್ಬರನ್ನೂ ಒಂದು ಮಾಡಲು ಪ್ರಯತ್ನಿಸಿದ್ದರು. ಆದರೆ, ರಾಜಿ ಸಂಧಾನ ಸಾಧ್ಯವಾಗಿಲ್ಲ ಎಂದು ಲಾಯರ್ ಅನಿತಾ ತಿಳಿಸಿದ್ದಾರೆ.ಮೀಡಿಯೇಟರ್‌ ಆಗಿ ಲಾಯರ್ ಅನಿತಾ ಕೂಡ ಇಬ್ಬರನ್ನ ಒಂದು ಮಾಡಲು ಪ್ರಯತ್ನ ಪಟ್ಟಿದ್ದರು.

 ಆದರೆ, ವಿಚ್ಛೇದನ ಪಡೆಯುವ ಬಗ್ಗೆ ಇಬ್ಬರೂ ತೀರ್ಮಾನಿಸಿದ್ದರಿಂದ ಅದೂ ಸಾಧ್ಯವಾಗಲಿಲ್ಲ. ಜಡ್ಜ್ ಕೂಡಾ ಅದನ್ನೇ ಹೇಳಿದ್ದಾರೆ. ಯಶ್ ರಾಧಿಕಾ ಪಂಡಿತ್ ಅವರಂತೆ ಬದುಕಿ ಎಂದು ಸಲಹೆ ನೀಡಿದ್ದಾರೆ. ಆದರೆ ಅವರಿಬ್ಬರೂ ಸಲಹೆ ಕೇಳುವ ಹಂತದಲ್ಲಿ ಇರಲಿಲ್ಲ  ನಮಗೆ ಒಟ್ಟಿಗೆ ಬದುಕಲು ಸಾಧ್ಯವಿಲ್ಲ ಡೈವೋರ್ಸ್ ಬೇಕೆ ಬೇಕು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.

News Hub