ರಾಜ್ಯ ಬಿ.ಜೆಪಿಯ ಬಂಡವಾಳ ಬಿಚ್ಚಿಟ್ಟ ಯತ್ನಾಳ್, ರಾಜ್ಯಾದ್ಯಂತ ಬಾರಿ ಮೆಚ್ಚುಗೆ

 | 
Nd

ಬಿಜೆಪಿಯ ಮುಖಂಡ ನೇರ ನುಡಿಯ ನಾಯಕ ಎಂದೇ ಹೆಸರು ಮಾಡಿದ್ದ ಯತ್ನಾಳ್ ಅವರೂ ಇದೀಗ ಯಡಿಯೂರಪ್ಪ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಲಿಂಗಾಯತ ನಾಯಕ ಬಿ ಎಸ್‌ ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾದ ಸಂದರ್ಭದಲ್ಲೂ ಸಹ ಬಿಎಸ್ವೈ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ್ದ ಬಸವನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿ ಎಸ್‌ ಯಡಿಯೂರಪ್ಪ ಅವರು ಈ ಹಿಂದೆ ಕೊರೋನಾ ಅವಧಿಯಲ್ಲಿ 45 ರೂಪಾಯಿ ಮಾಸ್ಕ್‌ ನ 485 ರೂಪಾಯಿ ಬಿಲ್‌ ಹಾಕಿ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಯತ್ನಾಳ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ. 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. 

ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಮತ್ತೆ ಬಹಿರಂಗವಾಗಿ ಕಿಡಿಕಾರಿದ್ದು, ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.