ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದಕ್ಕೆ ಕ್ರೀಡಾಂಗಣದಲ್ಲಿ ಎದ್ದು ಬಿದ್ದು ಕುಣಿದ ಯುವತಿಯರು
Feb 24, 2025, 15:31 IST
|

ಕ್ರಿಕೆಟ್ ಮ್ಯಾಚ್ ಇದ್ರೆ ಅದೇನೋ ಕ್ರೇಜ್.ದೆಹಲಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಟೀಂ ಇಂಡಿಯಾ ಗೆಲುವನ್ನು ಎಲ್ಲೆಡೆ ಸಂಭ್ರಮಾಚರಣೆ ಮಾಡಿದ್ದಾರೆ.ಬೆಂಗಳೂರಿನ ಹಲವೆಡೆ ರೋಹಿತ್ ಶರ್ಮಾ ಪಡೆ ಗೆಲುವನ್ನು ಸಂಭ್ರಮಿಸಲಾಗಿದೆ.
ಭಾರತ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕಿಂಗ್ ಕೊಹ್ಲಿ ಶತಕವನ್ನು ಕೊಂಡಾಡಿದ್ದಾರೆ.ನಗರದ ಪಬ್‌ಗಳಲ್ಲಿ ಡಿಜೆ ಸಾಂಗ್‌ಗಳನ್ನು ಹಾಕಿ ಫ್ಯಾನ್ಸ್ ಕುಣಿದು ಕುಪ್ಪಳಿಸಿದ್ದಾರೆ. ಈ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲಲಿ ಎಂದು ಶುಭಹಾರೈಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹನುಮಂತಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸೆಲಬ್ರೇಟ್ ಮಾಡಿದ್ದಾರೆ. ಪಾಕಿಸ್ತಾನ ವಿರುದ್ದ ಧಿಕ್ಕಾರ ಕೂಗಿ, ವಿರಾಟ್ ಕೊಹ್ಲಿಗೆ ಜೈಕಾರ ಕೂಗಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿಗೂ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಇನ್ನು ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹನುಮಂತಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸೆಲಬ್ರೇಟ್ ಮಾಡಿದ್ದಾರೆ. ಪಾಕಿಸ್ತಾನ ವಿರುದ್ದ ಧಿಕ್ಕಾರ ಕೂಗಿ, ವಿರಾಟ್ ಕೊಹ್ಲಿಗೆ ಜೈಕಾರ ಕೂಗಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿಗೂ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಚಿತ್ರದುರ್ಗ, ರಾಯಚೂರು ಸೇರಿದಂತೆ ಹಲವೆಡೆ ಟೀಂ ಇಂಡಿಯಾ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.